: ಉಚಿತ ಗ್ಯಾಸ್ ಕನೆಕ್ಷನ್ ಪಡೆಯಲು ಮತ್ತೊಮ್ಮೆ ಅವಕಾಶ..! : ಸಣ್ಣ ಸಣ್ಣ ಹಳ್ಳಿಗಳಲ್ಲಿ ಸಹ ಈ ಯೋಜನೆಯ ಸೌಲಭ್ಯ ಸಿಗಬೇಕು ಅನ್ನೋದು ಕೇಂದ್ರ ಸರ್ಕಾರದ ಉದ್ದೇಶವಾಗಿದ್ದು, ಉಜ್ವಲ ಯೋಜನೆಯ ಮೂಲಕ ಉಚಿತವಾಗಿ ಗ್ಯಾಸ್ ಸಿಲಿಂಡರ್ ಜೊತೆಗೆ ಪ್ರತಿ ತಿಂಗಳು ಗ್ಯಾಸ್ ಸಿಲಿಂಡರ್ ಪಡೆಯಲು ಸಬ್ಸಿಡಿಯನ್ನು ಸಹ ನೀಡಲಾಗುತ್ತದೆ. :ಪ್ರಧಾನ ಮಂತ್ರಿ ಉಜ್ವಲಾ ಯೋಜನೆ () ಇದು ಕೇಂದ್ರ ಸರ್ಕಾರದ ಒಂದು ಯೋಜನೆಯಾಗಿದೆ. ಬಡತನ ರೇಖೆಗಿಂತ ಕೆಳಗಿರುವ () ಕುಟುಂಬಗಳಿಗೆ ಅತ್ಯಂತ ಕಡಿಮೆ ಬೆಲೆಗೆ ಅಡುಗೆ ಅನಿಲವನ್ನು ಪೂರೈಸುವುದು ಈ ಯೋಜನೆಯ ಗುರಿಯಾಗಿದೆ. ಪ್ರಧಾನಿ ನರೇಂದ್ರ ಮೋದಿಯವರು 2016 ಮೇ 1ರಂದು ಈ ಯೋಜನೆಯನ್ನು ಉದ್ಘಾಟಿಸಿದರು. ಮೊದಲ ಹಂತದಲ್ಲಿ ಈ ಯೋಜನೆಗಾಗಿ ₹80 ಶತಕೋಟಿ ಮೊತ್ತವನ್ನು ಮೀಸಲಿರಿಸಲಾಗಿತ್ತು. ಈ ಯೋಜನೆಗೆ ಇದೀಗ ಉಜ್ವಲ ಯೋಜನೆ 2.0 ಎಂದು ಮರುಹೆಸರಿಸಲಾಯಿತು. ನೇತೃತ್ವದ ಕೇಂದ್ರ ಸರ್ಕಾರವು ನಮ್ಮ ದೇಶದ ಹಳ್ಳಿಗಳಲ್ಲಿರುವ ಜನರು ಅಡುಗೆ ವಿಚಾರಕ್ಕೆ ಯಾವುದೇ ರೀತಿಯ ಸಮಸ್ಯೆಗಳನ್ನು ಎದುರಿಸದಿರಲಿ, ಹೊಗೆಮುಕ್ತರಾಗಿ ಅಡುಗೆ ಮಾಡುವ ಮೂಲಕ ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳಲಿ ಅನ್ನೋ ಉದ್ದೇಶದಿಂದ 2016ರಲ್ಲಿ ಉಜ್ವಲ ಯೋಜನೆಯನ್ನು ಜಾರಿಗೆ ತಂದರು. ಈ ಒಂದು ಯೋಜನೆಯ ಮೂಲಕ ದೇಶದ ಕೋಟ್ಯಂತರ ಜನರಿಗೆ ಉಚಿತವಾಗಿ ಗ್ಯಾಸ್ ಸಿಲಿಂಡರ್ ಕನೆಕ್ಷನ್ ಸಿಗುತ್ತಿದೆ. ಇದನ್ನೂ ಓದಿ: ಉಚಿತ ಗ್ಯಾಸ್ ಸಿಲಿಂಡರ್‌ಗೆ ಅರ್ಜಿ ಸಣ್ಣ ಸಣ್ಣ ಹಳ್ಳಿಗಳಲ್ಲಿ ಸಹ ಈ ಯೋಜನೆಯ ಸೌಲಭ್ಯ ಸಿಗಬೇಕು ಅನ್ನೋದು ಕೇಂದ್ರ ಸರ್ಕಾರದ ಉದ್ದೇಶವಾಗಿದ್ದು, ಉಜ್ವಲ ಯೋಜನೆಯ ಮೂಲಕ ಉಚಿತವಾಗಿ ಗ್ಯಾಸ್ ಸಿಲಿಂಡರ್ ಜೊತೆಗೆ ಪ್ರತಿ ತಿಂಗಳು ಗ್ಯಾಸ್ ಸಿಲಿಂಡರ್ ಪಡೆಯಲು ಸಬ್ಸಿಡಿಯನ್ನು ಸಹ ನೀಡಲಾಗುತ್ತದೆ. ಹೀಗಾಗಿ ಇದು ಹಳ್ಳಿಗಳಲ್ಲಿ ವಾಸ ಮಾಡುವ ಜನರಿಗೆ ಹೆಚ್ಚಿಗೆ ಅನುಕೂಲವಾಗುತ್ತಿದೆ. ಇದರಿಂದ ಹಳ್ಳಿಯ ಜನರು ತೊಂದರೆ ಇಲ್ಲದೇ ಅಡುಗೆ ಮಾಡಬಹುದು. 2016ರಲ್ಲಿ ಈ ಯೋಜನೆ ಜಾರಿಗೆ ಬಂದಿದ್ದು, ಈಗಾಗಲೇ 1 ಕೋಟಿಗಿಂತ ಹೆಚ್ಚು ಫಲಾನುಭವಿಗಳು ಈ ಯೋಜನೆಯ ಮೂಲಕ ಉಚಿತವಾಗಿ ಗ್ಯಾಸ್ ಸಿಲಿಂಡರ್ ಕನೆಕ್ಷನ್ ಪಡೆದುಕೊಂಡಿದ್ದಾರೆ. ಇದೀಗ ಉಜ್ವಲ ಯೋಜನೆಯ 2ನೇ ಹಂತದ ಪ್ರಕ್ರಿಯೆ ಶುರುವಾಗಿದ್ದು, ಯಾರೆಲ್ಲಾ ಈ ಯೋಜನೆಯ ಮೂಲಕ ಉಚಿತ ಗ್ಯಾಸ್ ಸಿಲಿಂಡರ್ ಪಡೆಯಬೇಕು ಎಂದುಕೊಂಡಿದ್ದಾರೋ ಅವರೆಲ್ಲರೂ ಸಹ ಸರ್ಕಾರದಿಂದ ಅಧಿಕೃತ ಮಾಹಿತಿ ಸಿಗುತ್ತಿದ್ದ ಹಾಗೆ ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು. ಯೋಜನೆಯ ಅರ್ಹತೆ ಈ ಯೋಜನೆಗೆ ಅಗತ್ಯವಿರುವ ದಾಖಲೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಇದನ್ನೂ ಓದಿ: ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...