: ಜೂನ್‌, ಜುಲೈ & ಆಗಸ್ಟ್ ಗೃಹಲಕ್ಷ್ಮಿ ಹಣ ಬಿಡುಗಡೆ ಬಗ್ಗೆ ಬಿಗ್ ಅಪ್‌ಡೇಟ್‌! : ಗೃಹಲಕ್ಷ್ಮಿ ಯೋಜನೆಯ 11 ತಿಂಗಳ ಹಣ ಬಿಡುಗಡೆಯಾಗಿದ್ದು, ಬಾಕಿ ಉಳಿದಿರುವ ಜೂನ್‌, ಜುಲೈ ಹಾಗೂ ಆಗಸ್ಟ್ ತಿಂಗಳ ಹಣವನ್ನು ಶೀಘ್ರವೇ ಬಿಡುಗಡೆ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮೂಲಗಳು ತಿಳಿಸಿವೆ. :ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ʼಗೃಹಲಕ್ಷಿʼಗೆ ಇಂದಿಗೆ ಭರ್ತಿ ಒಂದು ವರ್ಷ. ಕಳೆದ ವರ್ಷ ನಡೆದ ವಿಧಾನಸಭೆಗೂ ಮುನ್ನ ಕಾಂಗ್ರೆಸ್‌ ರಾಜ್ಯದ ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆ ಅನುಷ್ಠಾನ ಮಾಡುವುದಾಗಿ ಘೋಷಿಸಿತ್ತು. ಅದರಂತೆ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ನಂತರವು ಮನೆಯ ಯಜಮಾನಿಗೆ ಪ್ರತಿ ತಿಂಗಳು 2000 ರೂ. ನೀಡುವ ಗೃಹಲಕ್ಷ್ಮಿ ಯೋಜನೆಯನ್ನು ಜಾರಿಗೊಳಿಸಿತ್ತು. ಇದುವರೆಗೆ ಬರೋಬ್ಬರಿ 25,000 ಕೋಟಿ ರೂ. ಹಣ ಗೃಹಲಕ್ಷ್ಮಿಯರ ʼಕೈʼ ಸೇರಿದೆ. ಇದರಿಂದ 1.25 ಕೋಟಿ ಗೃಹಲಕ್ಷ್ಮಿಯರು ಆರ್ಥಿಕ ಸ್ವಾವಲಂಬಿಗಳಾಗಿ ನೆಮ್ಮದಿಯ ಬದುಕು ಕಟ್ಟಿಕೊಂಡಿದ್ದಾರೆ. ಇದನ್ನೂ ಓದಿ: ಜೂನ್ ತಿಂಗಳ ಗೃಹಲಕ್ಷ್ಮಿ ಹಣವು ಫಲಾನುಭವಿಗಳ ಖಾತೆಗೆ ಸೇರಿದ್ದು, ಅನೇಕರಿಗೆ ಇನ್ನೂ ಹಣ ತಲುಪಿಲ್ಲ. ಇದಕ್ಕೆ ತೊಡಕಾಗಿದ್ದ ತಾಂತ್ರಿಕ ದೋಷವನ್ನು ಈಗಾಗಲೇ ಸರಿ ಮಾಡಿದ್ದೇವೆ. ಜುಲೈ ಮತ್ತು ಆಗಸ್ಟ್‌ ತಿಂಗಳ ಗೃಹಲಕ್ಷ್ಮಿ ಹಣದ ಬಗ್ಗೆ ಸಿಎಂ ಸಿದ್ದರಾಮಯ್ಯರೊಂದಿಗೆ ಚರ್ಚಿಸಿದ್ದೇವೆ. ಮುಂದಿನ ವಾರದೊಳಗೆ ಈ ಎರಡೂ ತಿಂಗಳ ಹಣ ಗೃಹಲಕ್ಷ್ಮಿಯರ ಖಾತೆಗೆ ಬರಲಿದೆ ಅಂತಾ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಹೇಳಿದ್ದಾರೆ. ಯಾವುದೇ ಕಾರಣಕ್ಕೂ ರಾಜ್ಯ ಸರ್ಕಾರದಯೋಜನೆಗಳು ನಿಲ್ಲಿಸುವುದಿಲ್ಲ. ಗೃಹಲಕ್ಷ್ಮಿ ಯೋಜನೆಯ 11 ತಿಂಗಳ ಹಣ ಬಿಡುಗಡೆಯಾಗಿದ್ದು, ಬಾಕಿ ಉಳಿದಿರುವ ಜೂನ್‌, ಜುಲೈ ಹಾಗೂ ಆಗಸ್ಟ್ ತಿಂಗಳ ಹಣವನ್ನು ಶೀಘ್ರವೇ ಬಿಡುಗಡೆ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮೂಲಗಳು ತಿಳಿಸಿವೆ. ಇದನ್ನೂ ಓದಿ: ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...