: ಮೂರನೇ ಬಾರಿಗೆ ಅಧಿಕಾರ ಸ್ವೀಕರಿಸಿ, ಪ್ರಧಾನಿ ಮೋದಿ ಮಾಡಿದ ಮೊದಲ ಕೆಲಸ ಇದು! : ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ನಂತರ ₹ 20,000 ಕೋಟಿ ಮೌಲ್ಯದ ಪಿಎಂ ಕಿಸಾನ್ ನಿಧಿ ಕಂತು ಬಿಡುಗಡೆ ಮಾಡಿದರು. :ಭಾರತದಲ್ಲಿ ಸತತ ಮೂರನೇ ಬಾರಿಗೆ ಪ್ರಧಾನಿಯಾಗಿ ಪದಗ್ರಹಣ ಮಾಡಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ( ) ಅಧಿಕಾರ ವಹಿಸಿಕೊಂಡ ನಂತರ ಮೊದಲಿಗೆ ಪಿಎಂ ಕಿಸಾನ್ ನಿಧಿಯ 17 ನೇ ಕಂತಿನ ಫೈಲ್‌ಗೆ ಸಹಿ ಹಾಕಿದರು. ಸೋಮವಾರ (ಜೂನ್ 06, 2024)( 17th ) ಬಿಡುಗಡೆಗೆ ಪ್ರಧಾನಿ ನರೇಂದ್ರ ಮೋದಿ ಅನುಮೋದನೆ ನೀಡಿದ್ದಾರೆ. ಈ ಕಂತಿನಲ್ಲಿ ದೇಶಾದ್ಯಂತ 9.3 ಕೋಟಿ ರೈತರ ಖಾತೆಗಳಿಗೆ ಸುಮಾರು ₹ 20,000 ಕೋಟಿಯಷ್ಟು ಹಣ ವರ್ಗಾವಣೆಯಾಗಲಿದೆ. ಇದನ್ನೂ ಓದಿ- ಯ ಕಡತಕ್ಕೆ ಸಹಿ ಹಾಕಿದ ಬಳಿಕ, "ನಮ್ಮದು ಕಿಸಾನ್ ಕಲ್ಯಾಣಕ್ಕೆ ( ) ಸಂಪೂರ್ಣ ಬದ್ಧವಾಗಿರುವ ಸರ್ಕಾರ. ಆದ್ದರಿಂದ, ಅಧಿಕಾರ ವಹಿಸಿಕೊಂಡ ಮೇಲೆ ರೈತ ಕಲ್ಯಾಣಕ್ಕೆ ಸಂಬಂಧಿಸಿದ ಕಡತಕ್ಕೆ ಮೊದಲು ಸಹಿ ಮಾಡುವುದು ಸೂಕ್ತ ಎಂದು ಭಾವಿಸಿದ್ದೇನೆ. ಮುಂದಿನ ದಿನಗಳಲ್ಲಿ ನಾವು ರೈತರು ಹಾಗೂ ಕೃಷಿ ಕ್ಷೇತ್ರದ ಅಭಿವೃದ್ಧಿಗಾಗಿ ( ) ಇನ್ನಷ್ಟು ಕೆಲಸ ಮಾಡಲು ಬಯಸುತ್ತೇವೆ" ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿರುವುದಾಗಿ ತಿಳಿದುಬಂದಿದೆ. ಇದನ್ನೂ ಓದಿ- ಏನಿದು ಪಿಎಂ ಕಿಸಾನ್ ಯೋಜನೆ?ಪಿಎಂ ಕಿಸಾನ್ ಯೋಜನೆಯು ಕೇಂದ್ರ ಸರ್ಕಾರ ರೈತರಿಗಾಗಿ ಜಾರಿಗೆ ತಂದಿರುವ ಮಹಾತ್ವಾಕಾಂಕ್ಷೆಯ ಯೋಜನೆಯಾಗಿದ್ದು ಈ ಯೋಜನೆಯಡಿ ಅರ್ಹ ರೈತರಿಗೆ ಕೇಂದ್ರ ಸರ್ಕಾರವು ವಾರ್ಷಿಕ ₹ 6,000 ಆರ್ಥಿಕ ನೆರವು ನೀಡುತ್ತದೆ. ಈ ಹಣವನ್ನು ವಾರ್ಷಿಕ ಮೂರು ಕಂತುಗಳಲ್ಲಿ ರೈತರ ಖಾತೆಗೆ ನೇರವಾಗಿ ಜಮಾ ಮಾಡಲಾಗುತ್ತದೆ. ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...