ರಾಜ್ಯದ ರೈತರ ಕಷ್ಟಕ್ಕೆ ಸ್ಪಂದಿಸಿದ ಕೇಂದ್ರ ಸರ್ಕಾರ :ಗಣೇಶ ಹಬ್ಬಕ್ಕೆ ಘೋಷಿಸಿದೆ ಭರ್ಜರಿ ಗಿಫ್ಟ್ ಗಣೇಶ ಹಬ್ಬ ಸಮೀಪಿಸುತ್ತಿದ್ದಂತೆಯೇ ಕೇಂದ್ರ ಸರ್ಕಾರ ರಾಜ್ಯದ ರೈತರಿಗೆ ಭರ್ಜರಿ ಗಿಫ್ಟ್ ಘೋಷಿಸಿದೆ. ಈ ಮೂಲಕ ರೈತರ ಕಷ್ಟಕ್ಕೆ ಸ್ಪಂದಿಸಿದೆ. ನವದೆಹಲಿ :ರಾಜ್ಯದಲ್ಲಿ ಮತ್ತೆರೆಡು ಬೆಳೆಗಳನ್ನು ಬೆಂಬಲ ಬೆಲೆಯಲ್ಲಿ ಖರೀದಿಸಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ತಿಳಿಸಿದ್ದಾರೆ.ರಾಜ್ಯದಲ್ಲಿ ಹೆಸರು, ಸೂರ್ಯಕಾಂತಿ ಜತೆಗೆ ಈಗ ಉದ್ದು ಮತ್ತು ಸೋಯಾಬಿನ್ ಅನ್ನೂ ಬೆಂಬಲ ಬೆಲೆಯಲ್ಲಿ ಖರೀದಿಸುವಂತೆ ರಾಜ್ಯ ಸರ್ಕಾರಕ್ಕೆ ಕೇಂದ್ರ ನಿರ್ದೇಶಿಸಿದೆ ಎಂದು ಹೇಳಿದ್ದಾರೆ. ನಾಲ್ಕೈದು ದಿನಗಳ ಹಿಂದಷ್ಟೇಬೆಳೆಯನ್ನು ಬೆಂಬಲ ಬೆಲೆಯಲ್ಲಿ ಖರೀದಿಸಲು ಅನುಮತಿ ನೀಡಿದ್ದ ಕೇಂದ್ರ ಸರ್ಕಾರ, ಇದೀಗ ಉದ್ದು ಮತ್ತು ಸೋಯಾಬಿನ್ ಅನ್ನೂ ಬೆಂಬಲ ಬೆಲೆಯಲ್ಲಿ ಖರೀದಿಸಲು ಅನುಮೋದನೆ ನೀಡಿದೆ.ಈ ಮೂಲಕ ರಾಜ್ಯದ ರೈತರಿಗೆ ಗಣೇಶ ಹಬ್ಬದ ಗಿಫ್ಟ್ ನೀಡಿದೆ ಎಂದಿದ್ದಾರೆ ಸಚಿವ ಜೋಶಿ. ಇದನ್ನೂ ಓದಿ : "ಹೆಸರು ಮತ್ತು ಸೂರ್ಯಕಾಂತಿ"ಗೆ ಬೆಂಬಲ ಬೆಲೆ ಘೋಷಿಸಿ ರಾಜ್ಯದಲ್ಲಿ ಖರೀದಿ ಕೇಂದ್ರ ತೆರೆಯುತ್ತಿದ್ದಂತೆಯೇ ಕೇಂದ್ರ ಕೃಷಿ ಸಚಿವಾಲಯ ಇದೀಗ "ಉದ್ದು ಮತ್ತು ಸೋಯಾಬೀನ್"ಗೂ ಬೆಂಬಲ ಬೆಲೆ ಖರೀದಿ ಕೇಂದ್ರ ತೆರೆಯಲು ರಾಜ್ಯ ಸರ್ಕಾರಕ್ಕೆ ಅನುಮತಿ ನೀಡಿದೆ. ಕರ್ನಾಟಕದಲ್ಲಿ 2024-25 ರ ಮುಂಗಾರು ಹಂಗಾಮಿನಲ್ಲಿ ಬೆಂಬಲ ಬೆಲೆ ಯೋಜನೆಯಡಿ 19,760 ಮೆಟ್ರಿಕ್ ಟನ್ ಉದ್ದು ಹಾಗೂ 1,03,315 ಮೆಟ್ರಿಕ್ ಟನ್ ಸೋಯಾಬಿನ್ ಖರೀದಿಗೆ ಕೇಂದ್ರ ಸರ್ಕಾರ ಅಸ್ತು ಎಂದಿದೆ.ಮುಕ್ತ ಮಾರುಕಟ್ಟೆಯಲ್ಲಿ ಈ ಬೆಳೆಗಳಿಗೆ ಬೆಲೆ ಕಡಿಮೆ ಇರುವುದರಿಂದ ಅಡಿಯಲ್ಲಿ ಖರೀದಿಸಿ ರೈತರಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದಈ ಕ್ರಮ ಕೈಗೊಂಡಿದೆ ಎಂದು ಸಚಿವ ಜೋಶಿ ತಿಳಿಸಿದ್ದಾರೆ. ರಾಜ್ಯದಲ್ಲಿ 90 ದಿನಗಳ ಅವಧಿಗೆ ಖರೀದಿ ಕೇಂದ್ರ ತೆರೆದು ಬೆಂಬಲ ಬೆಲೆ ಯೋಜನೆಯಡಿ ಉದ್ದು ಮತ್ತು ಸೋಯಾಬೀನ್ ಖರೀದಿಸುವಂತೆ ಕೇಂದ್ರ ಕೃಷಿ ಸಚಿವಾಲಯ ರಾಜ್ಯ ಸರ್ಕಾರಕ್ಕೆ ನಿನ್ನೆಯೇ (ಆ.29)ಆದೇಶ ಹೊರಡಿಸಿದೆ ಎಂದು ಪ್ರಲ್ಹಾದ ಜೋಶಿ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ : ಉದ್ದಿನ ಬೇಳೆಗೆ 7400 ರೂ. ಮತ್ತು ಸೋಯಾಬಿನ್ ಗೆ 4892 ರೂ.ಬೆಂಬಲ ಬೆಲೆಯನ್ನು ಕೇಂದ್ರ ಸರ್ಕಾರ ನಿಗದಿಪಡಿಸಿದೆ.ಕಳೆದ ವರ್ಷ 6950 ರೂ. ಇದ್ದ ಉದ್ದಿನ ಬೆಂಬಲ ಬೆಲೆ ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ 450 ರೂ. ಹೆಚ್ಚಳ ಕಂಡಿದೆ. 4600 ದರವಿದ್ದ ಸೋಯಾಬಿನ್ ಬೆಂಬಲ ಬೆಲೆ ಈಗ 292 ರೂ. ಚ್ಚಳವಾಗಿದೆ. ತಕ್ಷಣ ಖರೀದಿ ಕೇಂದ್ರ ತೆರೆಯಲು ಒತ್ತಾಯ:ರಾಜ್ಯ ಸರ್ಕಾರ ತಕ್ಷಣವೇ ರಾಜ್ಯಾದ್ಯಂತ ಬೆಂಬಲ ಬೆಲೆ ಖರೀದಿ ಕೇಂದ್ರಗಳನ್ನು ಆರಂಭಿಸಿ ಹೆಸರು, ಸೂರ್ಯಕಾಂತಿ ಜತೆಗೆ ಉದ್ದು ಮತ್ತು ಸೋಯಾಬಿನ್ ಖರೀದಿ ಪ್ರಕ್ರಿಯೆಗೆ ಚಾಲನೆ ನೀಡಬೇಕೆಂದು ಸಚಿವ ಪ್ರಲ್ಹಾದ ಜೋಶಿ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...