: ಬಿಗ್ ರಿಲೀಫ್.. ಭಾರೀ ಇಳಿಕೆಯಾದ ಚಿನ್ನದ ಬೆಲೆ ! : ಇದೀಗ ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆಯಾಗಿದೆ. ಶನಿವಾರ ದೇಶದ ಹಲವು ಪ್ರಮುಖ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿಯ ಬೆಲೆ ಹೇಗಿದೆ ಎಂಬುದನ್ನು ನೋಡೋಣ. 25-05-2024 :ಚಿನ್ನ ಪ್ರಿಯರಿಗೆ ಇದು ನಿಜಕ್ಕೂ ಸಂತಸದ ಸುದ್ದಿ. ಇಲ್ಲಿಯವರೆಗೆ, ಖರೀದಿದಾರರು ಚಿನ್ನದ ಬೆಲೆ ಏರಿಕೆಯಿಂದ ಕಂಗಾಲಾಗಿದ್ದರು. ಆದರೆ ಇದೀಗ ಚಿನ್ನದ ಬೆಲೆ ಇಳಿಕೆಯಾಗಿದೆ. 10 ಗ್ರಾಂ ಚಿನ್ನದ ಬೆಲೆ 80 ಸಾವಿರ ಸಮೀಪಕ್ಕೆ ಹೊರಟಿತ್ತು. ಇದೀಗ ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆಯಾಗಿದೆ. ಶನಿವಾರ ದೇಶದ ಹಲವು ಪ್ರಮುಖ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿಯ ಬೆಲೆ ಹೇಗಿದೆ ಎಂಬುದನ್ನು ನೋಡೋಣ. ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ ರೂ. 66,540 ಆಗಿದ್ದರೆ 24 ಕ್ಯಾರೆಟ್ ಚಿನ್ನದ ಬೆಲೆ ರೂ. 72,580 ಆಗಿದೆ. ದೇಶದ ಆರ್ಥಿಕ ರಾಜಧಾನಿ ಮುಂಬೈನಲ್ಲಿ 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ ರೂ. 66,390 ಆಗಿದ್ದರೆ 24 ಕ್ಯಾರೆಟ್ ಚಿನ್ನದ ಬೆಲೆ ರೂ. 72,430 ಆಗಿದೆ. ಇದನ್ನೂ ಓದಿ: ಚೆನ್ನೈನಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ರೂ. 66,490 ಆಗಿದ್ದರೆ 24 ಕ್ಯಾರೆಟ್ ಚಿನ್ನದ ಬೆಲೆ ರೂ. 72,540 ಆಗಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ ರೂ. 66,390 ಆಗಿದ್ದರೆ 24 ಕ್ಯಾರೆಟ್ ಚಿನ್ನದ ಬೆಲೆ ರೂ. 72,430ರಲ್ಲಿ ಆಗಿದೆ. ಬೆಂಗಳೂರಿನಲ್ಲಿ 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ ರೂ. 66,390 ಆಗಿದ್ದರೆ 24 ಕ್ಯಾರೆಟ್ ಚಿನ್ನದ ಬೆಲೆ ರೂ. 72,430ರಲ್ಲಿ ಆಗಿದೆ. ಬೆಳ್ಳಿ ಬೆಲೆಯೂ ಇಳಿಕೆ : ಬೆಳ್ಳಿ ಬೆಲೆಯೂ ಇಳಿಕೆ ಕಂಡಿದೆ. ದೇಶದ ಕೆಲವು ಭಾಗಗಳಲ್ಲಿ ಒಂದು ಕಿಲೋ ಬೆಳ್ಳಿಯ ಬೆಲೆ ಲಕ್ಷದ ಗಡಿ ತಲುಪಿತ್ತು. ಪ್ರಸ್ತುತ ದೆಹಲಿ, ಕೋಲ್ಕತ್ತಾ, ಮುಂಬೈ ಮತ್ತು ಪುಣೆಯಂತಹ ನಗರಗಳಲ್ಲಿ ಪ್ರತಿ ಕೆಜಿ ಬೆಳ್ಳಿಯ ಬೆಲೆ ರೂ. 91,900 ಆಗಿದೆ. ಹೈದರಾಬಾದ್, ಬೆಂಗಳೂರು ಮತ್ತು ಕೇರಳದಲ್ಲಿ ಪ್ರತಿ ಕೆಜಿ ಬೆಳ್ಳಿ ಬೆಲೆ ರೂ. 92,400 ಆಗಿದೆ. ಇದನ್ನೂ ಓದಿ: ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...