: ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸುವ ಮುನ್ನ ಈ ಸುದ್ದಿ ಓದಿ : ಕರ್ನಾಟಕದಲ್ಲಿ ಹೊಸ ಅಥವಾ ಪಡಿತರ ಚೀಟಿಗೆ ಅರ್ಜಿ ಸಲ್ಲಿಸುವುದು ಹೇಗೆ ಹಾಗೂ ಯಾವ್ಯಾವ ದಾಖಲೆಗಳು ಬೇಕು ಅನ್ನೋದರ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ. :ಬರೋಬ್ಬರಿ ಒಂದೂವರೆ ವರ್ಷಗಳ ಕಾಲ ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಲಾಗಿತ್ತು. ಜೂನ್‌ ತಿಂಗಳಿನಲ್ಲಿ ಮತ್ತೆ ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಕೆ ಆರಂಭವಾಗಲಿದೆ. ಅರ್ಜಿ ಸಲ್ಲಿಸುವವರು ಕೆಲವು ಪ್ರಮುಖ ಅಂಶಗಳನ್ನು ಗಮನಿಸಬೇಕು. ಅರ್ಹರು ರಾಜ್ಯದ ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯ ಅಧಿಕೃತ ವೆಬ್‌ಸೈಟ್‌ ... ಮೂಲಕ ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಬಹುದು. ರಾಜ್ಯದಪಟ್ಟಿಯಲ್ಲಿ ಹೆಸರು ಇಲ್ಲದವರು ಅಗತ್ಯವಿರುವ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದು. ಕರ್ನಾಟಕದಲ್ಲಿ ಹೊಸ ಅಥವಾ ಪಡಿತರ ಚೀಟಿಗೆ ಅರ್ಜಿ ಸಲ್ಲಿಸುವುದು ಹೇಗೆ ಹಾಗೂ ಯಾವ್ಯಾವ ದಾಖಲೆಗಳು ಬೇಕು ಅನ್ನೋದರ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ. ಇದನ್ನೂ ಓದಿ: ಅರ್ಜಿ ಸಲ್ಲಿಕೆಗೆ ಬೇಕಾಗುವ ದಾಖಲಾತಿಗಳು * ವೋಟರ್ ಐಡಿ* ಆಧಾರ್ ಕಾರ್ಡ್* ಇತ್ತೀಚಿನ ಪಾರ್ಸ್‌ಪೋರ್ಟ್ ಸೈಜ್‌ ಫೋಟೋ* ಮೊಬೈಲ್ ಸಂಖ್ಯೆ ಈ ದಾಖಲೆಗಳು ಇದ್ದರೆ ಮಾತ್ರ ಆನ್‌ಲೈನ್ ಮೂಲಕ ಹೊಸ ಪಡಿತರ ಚೀಟಿಗೆ ನೀವು ಅರ್ಜಿ ಸಲ್ಲಿಸಬಹುದು. ಅಧಿಕೃತ ವೆಬ್‌ಸೈಟ್ ..inಗೆ ಭೇಟಿ ನೀಡಬೇಕು. ಬಳಿಕ ಮುಖಪುಟದಲ್ಲಿನ ಇ-ಸೇವೆಗಳು ಎನ್ನುವ ಆಯ್ಕೆ ಮೇಲೆ ಕ್ಲಿಕ್ ಮಾಡುವ ಮೂಲಕ ಅರ್ಜಿ ಸಲ್ಲಿಸಬಹುದು. ಇದಲ್ಲದೆವೆಬ್‌ಸೈಟ್‌ನ ಲಿಂಕ್‌ಅನ್ನು ನೇರವಾಗಿ ಕ್ಲಿಕ್ ಮಾಡಬಹುದು. ಬಳಿಕ ಇ-ಪಡಿತರ ಚೀಟಿ ಆಯ್ಕೆ ಮಾಡಿ. ಬಳಿಕ ಕೆಳಗಡೆ ಸ್ಕ್ರಾಲ್ ಮಾಡಿದರೆ, ಹೊಸ ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸುವ ಲಿಂಕ್ ಸಿಗಲಿದೆ. ಅಲ್ಲಿ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಲು ಭಾಷೆಯನ್ನು ಆಯ್ಕೆ ಮಾಡಬೇಕು. ಅಲ್ಲಿ ಕೇಳುವ ಎಲ್ಲಾ ಮಾಹಿತಿ ಭರ್ತಿ ಮಾಡಬೇಕು. ನೀವು ಅಥವಾಗೆ ಅರ್ಜಿ ಸಲ್ಲಿಸುತ್ತಿದ್ದೀರಾ ಅನ್ನೋದನ್ನು ಆಯ್ಕೆ ಮಾಡಿಕೊಂಡು ನಮೂದಿಸಬೇಕು. ಅಂತಿಮವಾಗಿ ಅರ್ಜಿಯ ಜೊತೆ ಅಲ್ಲಿ ಕೇಳುವ ದಾಖಲೆಗಳ ಸಾಫ್ಟ್ ಕಾಫಿಗಳನ್ನು ಅಪ್‌ಲೋಡ್ ಮಾಡಿ, ಹೊಸ ಪಡಿತರ ಚೀಟಿಗೆ ಅರ್ಜಿಯನ್ನು ಸಲ್ಲಿಸಬೇಕಾಗುತ್ತದೆ. ಇದನ್ನೂ ಓದಿ: ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...