ದಶಕದ ಬಳಿಕ ಭರಚುಕ್ಕಿಯಲ್ಲಿ ಜಲಪಾತೋತ್ಸವ ಆಯೋಜನೆ : ಧುಮ್ಮಿಕ್ಕುವ ಜಲಪಾತಕ್ಕೆ ಶಬ್ಧ ಮತ್ತು ಬೆಳಕಿನ ಸಂಯೋಜನೆ ಮಾಡಲಿದ್ದು ಜಲಪಾತ ಮತ್ತಷ್ಟು ಆಕರ್ಷಕವಾಗಿರಲಿದೆ. ಇನ್ನು, ಖ್ಯಾತ ಗಾಯಕಿ ಅನನ್ಯ ಭಟ್ ತಂಡ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿ ಕೊಡಲಿದ್ದಾರೆ. :ಕಾವೇರಿ ಮೈದುಂಬಿ ಹರಿಯುತ್ತಿರುವ ಪರಿಣಾಮ‌ ಕೊಳ್ಳೇಗಾಲ ತಾಲೂಕಿನ ಭರಚುಕ್ಕಿ ಜಲಪಾತ ವೈಯ್ಯಾರದಿಂದ ಧುಮ್ಮಿಕ್ಕುತ್ತಿದ್ದು ದಶಕದ ಬಳಿಕ ಜಿಲ್ಲಾಡಳಿತ ಜಲಪಾತೋತ್ಸವ ಆಯೋಜನೆ ಮಾಡಿದೆ. 10 ವರ್ಷಗಳ ಬಳಿಕ ಭರಚುಕ್ಕಿಯಲ್ಲಿ ಜಲಪಾತೋತ್ಸವ:ಆ.10 ರಂದು ಸಂಜೆ 6 ಕ್ಕೆ ಭರಚುಕ್ಕಿಯಲ್ಲಿ ಜಲಪಾತೋತ್ಸವ ( ) ನಡೆಯಲಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ( ) ಕಾರ್ಯಕ್ರಮಕ್ಕೆ ಚಾಲನೆ ಕೊಡಲಿದ್ದಾರೆ. ಡಿಸಿಎಂ ಡಿ.ಕೆ.ಶಿವಕುಮಾರ್ ( ), ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್, ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ್ ಹಾಜರಿರಲಿದ್ದಾರೆ. ಇದನ್ನೂ ಓದಿ- ಶಬ್ಧ-ಬೆಳಕಿನ ಜುಗಲ್ಬಂದಿ:ಧುಮ್ಮಿಕ್ಕುವ ಜಲಪಾತಕ್ಕೆ () ಶಬ್ಧ ಮತ್ತು ಬೆಳಕಿನ ಸಂಯೋಜನೆ ಮಾಡಲಿದ್ದು ಜಲಪಾತ ಮತ್ತಷ್ಟು ಆಕರ್ಷಕವಾಗಿರಲಿದೆ. ಇನ್ನು, ಖ್ಯಾತ ಗಾಯಕಿ ಅನನ್ಯ ಭಟ್ ತಂಡ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿ ಕೊಡಲಿದ್ದಾರೆ. ಜಾನಪದಗಳ ನಾಡು ಎಂದೇ ಚಾಮರಾಜನಗರವನ್ನು ಕರೆಯುವ ಹಿನ್ನೆಲೆ ಜಾನಪದ ಸಂಗೀತ ಸುಧೆಯೂ ಇರಲಿದೆ ಎಂದು ಜಿಲ್ಲಾಧಿಕಾರಿಗಳು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ- ಜಿಲ್ಲಾಡಳಿತದ ವತಿಯಿಂದ 4 ಸಾವಿರ ಆಸನ ವ್ಯವಸ್ಥೆ ಮಾಡಲಾಗಿದ್ದು ಪಾರ್ಕಿಂಗ್ ಹಾಗೂ ಸೂಕ್ತ ಬಂದೋಬಸ್ತ್ ನ್ನು ಕೂಡ ಕೈಗೊಳ್ಳಲಾಗಿದೆ, ಒಂದು ದಿನ ಸಾಂಸ್ಕೃತಿಕ ಕಾರ್ಯಕ್ರಮ, ಎರಡು ದಿನ ಶಬ್ಧ-ಬೆಳಕಿನ ಚಿತ್ತಾರ ಇರಲಿದ್ದು, ಪ್ರವೇಶ ಉಚಿತ ಇರಲಿದೆ ಎಂದು ಡಿಸಿ ಶಿಲ್ಪಾನಾಗ್ ( ) ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...