ಪ್ರವಾಸಿಗರಿಗೆ ಸಿಹಿಸುದ್ದಿ: ಭಾರತದ ನಯಾಗರ 'ಹೊಗೆನಕಲ್ ಜಲಪಾತ'ಕ್ಕಿಲ್ಲ ನಿರ್ಬಂಧ ಕೇರಳದ ವೈನಾಡಿನಲ್ಲಿ ಅಪಾರ ಪ್ರಮಾಣದ ಮಳೆಯಾಗಿ ಕಬಿನಿ ಜಲಾಶಯ ಭರ್ತಿಯಾಗಿದ್ದ ಹಿನ್ನೆಲೆ ಕಬಿನಿ ಜಲಾಶಯದಿಂದ 70 ಸಾವಿರ ಕ್ಯೂಸೆಕ್ಸ್ ಹಾಗೂ ಕೆ ಆರ್ ಎಸ್ ಜಲಾಶಯದಿಂದ ಒಂದು ಲಕ್ಷಕ್ಕೂ ಹೆಚ್ಚು ಕ್ಯೂಸೆಕ್ಸ್ ನೀರನ್ನು ನದಿಗೆ ಬಿಡಲಾಗಿದ್ದರಿಂದ ಹೊಗೆನಕಲ್ ಫಾಲ್ಸ್ ನಲ್ಲಿ ಕಾವೇರಿ ರೌದ್ರ ನರ್ತನ ಉಂಟಾಗಿ ಜಲಪಾತವೇ ಮುಚ್ಚಿ ಹೋಗಿತ್ತು. ಚಾಮರಾಜನಗರ:ಭಾರತದ ನಯಾಗರ ಎಂದೇ ಪ್ರಸಿದ್ಧಿಯಾಗಿರುವ ಕರ್ನಾಟಕ ಮತ್ತು ತಮಿಳುನಾಡು ಗಡಿಯಲ್ಲಿರುವ ಹೊಗೆನಕಲ್ ಜಲಪಾತಕ್ಕೆ ತೆರಳುವ ಪ್ರವಾಸಿಗರ ಪ್ರವೇಶಕ್ಕೆ ಅವಕಾಶ ಮಾಡಿಕೊಡಲಾಗಿದೆ. ( ) ಅಪಾರ ಪ್ರಮಾಣದ ಮಳೆಯಾಗಿ ಕಬಿನಿ ಜಲಾಶಯ ಭರ್ತಿಯಾಗಿದ್ದ ಹಿನ್ನೆಲೆ ಕಬಿನಿ ಜಲಾಶಯದಿಂದ 70 ಸಾವಿರ ಕ್ಯೂಸೆಕ್ಸ್ ಹಾಗೂ ಕೆ ಆರ್ ಎಸ್ ಜಲಾಶಯದಿಂದ ಒಂದು ಲಕ್ಷಕ್ಕೂ ಹೆಚ್ಚು ಕ್ಯೂಸೆಕ್ಸ್ ನೀರನ್ನು ನದಿಗೆ ಬಿಡಲಾಗಿದ್ದರಿಂದ ಹೊಗೆನಕಲ್ ಫಾಲ್ಸ್ ನಲ್ಲಿ ಕಾವೇರಿ ರೌದ್ರ ನರ್ತನ ಉಂಟಾಗಿ ಜಲಪಾತವೇ ಮುಚ್ಚಿ ಹೋಗಿತ್ತು. ಈ ಹಿನ್ನೆಲೆ ಕಾವೇರಿ ವನ್ಯಜೀವಿ ವಲಯ ( ) ವ್ಯಾಪ್ತಿಯಲ್ಲಿ ಬರುವ ಗೋಪಿನಾಥಂ ವಲಯ ಅರಣ್ಯ ಅಧಿಕಾರಿಗಳು ಜುಲೈ 20 ರಿಂದ ಪ್ರವಾಸಿಗರಿಗೆ ನಿರ್ಬಂಧ ಹೇರಿದ್ದರು. ಇದನ್ನೂ ಓದಿ- ಇದೀಗ ನದಿ ಹರಿವಿನಲ್ಲಿ ನೀರಿನ ಪ್ರಮಾಣ ಕಡಿಮೆಯಾಗಿರುವುದರಿಂದ ಆಗಸ್ಟ್ ಏಳರಿಂದ() ತೆಪ್ಪದಲ್ಲಿ ಸಂಚಾರ ಮಾಡಲು ಅವಕಾಶ ಕಲ್ಪಿಸಿಕೊಡಲಾಗಿದೆ. ಇದನ್ನೂ ಓದಿ- ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಾಗಿದ್ದರಿಂದ ಪ್ರವಾಸಿಗರಿಗೆ ತೆಪ್ಪ ಸಂಚಾರ ನಿರ್ಬಂಧ ಮಾಡಲಾಗಿತ್ತು. ಇದೀಗ ನೀರಿನ ಪ್ರಮಾಣ ಕಡಿಮೆಯಾಗಿದ್ದು ತೆಪ್ಪ ಸಂಚರಿಸಲು ಅನುಕೂಲವಾಗಿರುವುದರಿಂದ ಪ್ರವಾಸಿಗರಿಗೆ ಅವಕಾಶ ಕಲ್ಪಿಸಲಾಗಿದೆ ಎಂದು ಆರ್ ಎಫ್ಒ ಸಂಪತ್ ತಿಳಿಸಿದ್ದಾರೆ. ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...