ತುಪ್ಪದ ಜೊತೆ ಚಪಾತಿ ತಿನ್ನುತ್ತೀರಾ? ಆರೋಗ್ಯಕರ ಬೆಳವಣಿಗೆಗೆ ಇದು ಉತ್ತಮ ಸಲಹೆ ತುಪ್ಪವು ಆರೋಗ್ಯಕ್ಕೆ ತುಂಬಾ ಒಳ್ಳೆಯದು ಮತ್ತು ಕೆಲವೊಂದು ಪದಾರ್ಥಗಳೊಟ್ಟಿಗೆ ತುಪ್ಪವು ಬಳಸಿಕೊಂಡು ತಿನ್ನುವುದು ಒಳ್ಳೆಯದು, ಅದೇ ರೀತಿ ಚಪಾತಿಯೊಂದಿಗೆ ತುಪ್ಪ ತಿನ್ನುವುದು ಒಳ್ಳೆಯದು ಯಾಕೆ ಗೊತ್ತಾ ಇಲ್ಲಿದೆ ನೋಡಿ. ಆರೋಗ್ಯ ತಜ್ಞರ ಪ್ರಕಾರ ತುಪ್ಪವು ನಮ್ಮ ಆರೋಗ್ಯಕ್ಕೆ ಹಲವಾರು ರೀತಿಯಲ್ಲಿ ಪ್ರಯೋಜನವನ್ನು ನೀಡುತ್ತದೆ. ಒಂದು ಚಮಚ ತುಪ್ಪ ತಿಂದರೆ ಅನೇಕ ರೋಗಗಳಿಂದ ದೂರವಿರಬಹುದು. ನಮ್ಮಲ್ಲಿ ಹೆಚ್ಚಿನವರು ಅನ್ನದ ಬದಲು ತುಪ್ಪದಿಂದ ಮಾಡಿದ ಚಪಾತಿ ಅಥವಾ ರೊಟ್ಟಿಯನ್ನು ಹೆಚ್ಚಾಗಿ ತಿನ್ನುತ್ತೇವೆ. ತುಪ್ಪವು ಚಪಾತಿಯನ್ನು ಮೃದುವಾಗಿಸುವುದು ಮಾತ್ರವಲ್ಲದೆ ನಮಗೆ ಅನೇಕ ಆರೋಗ್ಯ ಪ್ರಯೋಜನಗಳನ್ನು ನೀಡುತ್ತದೆ. ಆರೋಗ್ಯಕರ ಕೊಬ್ಬುಗಳು ನಮ್ಮ ಮೂಳೆಗಳು ಮತ್ತು ಸ್ನಾಯುಗಳನ್ನು ಆರೋಗ್ಯಕರವಾಗಿಡಲು ಸಹಾಯ ಮಾಡುತ್ತದೆ. ತುಪ್ಪದಲ್ಲಿ ಒಮೆಗಾ-3 ಕೊಬ್ಬಿನಾಮ್ಲ, ವಿಟಮಿನ್ ಎ, ವಿಟಮಿನ್ ಡಿ, ವಿಟಮಿನ್ ಇ ಮತ್ತು ವಿಟಮಿನ್ ಕೆ ಸಮೃದ್ಧವಾಗಿದೆ. ಇವು ನಮ್ಮ ದೇಹವನ್ನು ಆರೋಗ್ಯವಾಗಿರಿಸುತ್ತದೆ. ಇದನ್ನು ಓದಿ : ಒಂದು ರೊಟ್ಟಿ ಅಥವಾ ಚಪಾತಿಯು ಅಲ್ಪ ಪ್ರಮಾಣದ ಕಾರ್ಬೋಹೈಡ್ರೇಟ್‌ಗಳನ್ನು ಹೊಂದಿರುತ್ತದೆ. ಇವು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಹೆಚ್ಚಿಸುತ್ತವೆ. ಆದರೆ ತುಪ್ಪದಲ್ಲಿರುವ ಪ್ರೋಟೀನುಗಳು ಮತ್ತು ಆರೋಗ್ಯಕರ ಕೊಬ್ಬುಗಳು ರಕ್ತದಲ್ಲಿನ ಸಕ್ಕರೆಯ ಮಟ್ಟವು ಹೆಚ್ಚಾಗದಂತೆ ಸಹಾಯ ಮಾಡುತ್ತದೆ. ಅದಕ್ಕಾಗಿಯೇ ಮಧುಮೇಹಿಗಳು ತುಪ್ಪದೊಂದಿಗೆ ಚಪಾತಿ ತಿನ್ನುವುದು ಒಳ್ಳೆಯದು. ಇದನ್ನು ಓದಿ : ಗೋಧಿ ಹಿಟ್ಟಿನಲ್ಲಿರುವ ಕೊಬ್ಬು ಕರಗುವ ಜೀವಸತ್ವಗಳು ಮತ್ತು ಖನಿಜಗಳನ್ನು ಉತ್ತಮವಾಗಿ ಹೀರಿಕೊಳ್ಳಲು ತುಪ್ಪ ಸಹಾಯ ಮಾಡುತ್ತದೆ. ಆಹಾರದಲ್ಲಿ ತುಪ್ಪವನ್ನು ಸೇರಿಸುವುದು ತೂಕ ಇಳಿಸಿಕೊಳ್ಳಲು ಬಯಸುವವರಿಗೆ ತುಂಬಾ ಪ್ರಯೋಜನಕಾರಿ. ತುಪ್ಪದ ಜೊತೆ ಚಪಾತಿ ತಿಂದರೆ ಆರೋಗ್ಯಕರ ರೀತಿಯಲ್ಲಿ ತೂಕ ಕಡಿಮೆಯಾಗುತ್ತದೆ. ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...