ಗ್ಯಾಸ್, ಅಸಿಡಿಟಿ ಸಮಸ್ಯೆಯಿಂದ ಪರಿಹಾರಕ್ಕಾಗಿ ನಾರ್ಮಲ್ ಟೀ ಬದಲಿಗೆ ಈ ಹರ್ಬಲ್ ಟೀ'ಗಳನ್ನು ಸೇವಿಸಿ : ಚಹಾ ಆರೋಗ್ಯಕ್ಕೆ ಒಳ್ಳೆಯದಲ್ಲ ಎಂದು ಹೇಳಲಾಗುತ್ತದೆ. ಆದರೆ, ಕೆಲವು ಗಿಡಮೂಲಿಕೆಗಳಿಂದ ತಯಾರಿಸ ಚಹಾ ಆರೋಗ್ಯಕ್ಕೆ ಹಲವು ರೀತಿಯಲ್ಲಿ ಪ್ರಯೋಜನಕಾರಿ ಆಗಿದೆ. : ಕೆಲವರು ಚಹಾ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ ಎಂದು ಹೇಳಿದರೆ, ಇನ್ನೂ ಕೆಲವರು ಚಹಾ ಆರೋಗ್ಯಕ್ಕೆ ಒಳ್ಳೆಯದಲ್ಲ ಎಂದು ಹೇಳುತ್ತಾರೆ. ಅದರಲ್ಲೂ, ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಸೇವಿಸುವ ಬೆಡ್ ಟೀ ( ) ಆರೋಗ್ಯಕ್ಕೆ ಹಾನಿಕಾರಕ ಎಂದು ಹೇಳಲಾಗುತ್ತದೆ. ಆದರೆ, ನೀವು ಸಾಧಾರಣವಾಗಿ ಹಾಲಿನಿಂದ ತಯಾರಿಸಿದ ಚಹಾ ಸೇವಿಸುವುದಕ್ಕಿಂತ ಕೆಲವು ಗಿಡಮೂಲಿಕೆಗಳನ್ನು ಬಳಸಿ ತಯಾರಿಸಿದ ಚಹಾ ಸೇವಿಸುವುದು ಆರೋಗ್ಯಕ್ಕೆ ಒಳ್ಳೆಯದು ಎಂದು ನಿಮಗೆ ತಿಳಿದಿದೆಯೇ? ವಾಸ್ತವವಾಗಿ, ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಟೀ ( ) ಕುಡಿಯುವುದರಿಂದ ಗ್ಯಾಸ್, ಅಸಿಡಿಟಿ ಸೇರಿದಂತೆ ಹೊಟ್ಟೆಗೆ ಸಂಬಂಧಿಸಿದ ಹಲವು ಸಮಸ್ಯೆಗಳು ಉಂಟಾಗಬಹುದು. ಆದರೆ, ಹಾಲಿನ ಚಹಾ ( ) ಬದಲಿಗೆ ಗಿಡಮೂಲಿಕೆಗಳಿಂದ ತಯಾರಿಸಿದ ಚಹಾ ಎಂದರೆ ಹರ್ಬಲ್ ಟೀ ಕುಡಿಯುವುದು ನಿಮಗೆ ಹಲವು ರೀತಿಯಲ್ಲಿ ಪ್ರಯೋಜನಕಾರಿ ಆಗಿದೆ. ಅಂತಹ ಚಹಾಗಳು ಯಾವುವೆಂದರೆ... ದಾಲ್ಚಿನ್ನಿ ಚಹಾ ( ):ಭಾರತೀಯ ಅಡುಗೆ ಮನೆಯಲ್ಲಿ ಪ್ರಮುಖ ಮಸಾಲೆಯಾಗಿರುವತಯಾರಿಸಿ ಕುಡಿಯುವುದರಿಂದ ಇದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಡಯಾಬಿಟಿಸ್ ರೋಗಿಗಳಿಗೆ ಪ್ರಯೋಜನಕಾರಿ ಆಗಿದೆ. ಇದನ್ನೂ ಓದಿ- ಫೆನ್ನೆಲ್ ಚಹಾ ( ):ಫೆನ್ನೆಲ್ ಅಥವಾ ಸೋಂಪಿನಿಂದ ತಯಾರಿಸಿದ ಚಹಾ ಕೂಡ ಆರೋಗ್ಯಕ್ಕೆ ಒಳ್ಳೆಯದು. ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಈ ಫೆನ್ನೆಲ್ ಚಹಾ ಕುಡಿಯುವುದರಿಂದ ಗ್ಯಾಸ್, ಅಸಿಡಿಟಿ, ಹೊಟ್ಟೆ ಉಬ್ಬರದಂತಹ ಸಮಸ್ಯೆಗಳನ್ನು ನಿವಾರಿಸುತ್ತದೆ. ಅಷ್ಟೇ ಅಲ್ಲ, ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಿರುವವರಿಗೆ ಇದು ವರದಾನವಿದ್ದಂತೆ ಎಂದು ಹೇಳಲಾಗುತ್ತದೆ. ಅರಿಶಿನದ ಚಹಾ ( ):ಉರಿಯೂತ ನಿವಾರಕ ಗುಣಗಳಿಂದ ಸಮೃದ್ಧವಾಗಿರುವ ಅರಿಶಿನದಿಂದ ಟೀ ತಯಾರಿಸಿ ಕುಡಿಯುವುದರಿಂದ ಇದು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವುದರ ಜೊತೆಗೆ ಆರೋಗ್ಯಕ್ಕೆ ಹಲವು ಪ್ರಯೋಜನಗಳನ್ನು ನೀಡುತ್ತದೆ. ಹೈಬಿಸ್ಕಸ್ ಚಹಾ ( ):ಹೈಬಿಸ್ಕಸ್ ಎಂದರೆ ದಾಸವಾಳದಿಂದ ಮಾಡಲ್ಪಟ್ಟ ಚಹಾ ಪುಡಿಯಿಂದ ತಯಾರಿಸಿದ ಚಹಾ ಕುಡಿಯುವುದರಿಂದ ಮಧುಮೇಹಿಗಳಿಗೆ ರಕ್ತದಲ್ಲಿನ ಸಕ್ಕರೆ ಅಂಶವನ್ನು ನಿಯಂತ್ರಿಸಲು ಸಹಕಾರಿ ಆಗಿದೆ. ಅಲ್ಲದೆ, ಇದುಎಂದು ಸಾಬೀತುಪಡಿಸಲಿದೆ. ಇದನ್ನೂ ಓದಿ- ಶುಂಠಿ ಚಹಾ ( ):ಪ್ರತಿದಿನ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಶುಂಠಿ ಚಹಾ ಕುಡಿಯುವುದರಿಂದ ಇದು ಜೀರ್ಣಕ್ರಿಯೆಯನ್ನು ಸುಧಾರಿಸಿ ಆರೋಗ್ಯಕರವಾಗಿ ತೂಕ ಇಳಿಸಿಕೊಳ್ಳಲು ಪ್ರಯೋಜನಕಾರಿ ಎಂದು ಹೇಳಲಾಗುತ್ತದೆ. ಸೂಚನೆ:ಪ್ರಿಯ ಓದುಗರೇ, ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ದಯವಿಟ್ಟು ಅದನ್ನು ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಿ. ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ. ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...