ಕೂದಲುದುರುವಿಕೆ ಸಮಸ್ಯೆಗೆ ಕಾಫಿಯಿಂದ ಸಿಗುತ್ತೆ ಸುಲಭ ಪರಿಹಾರ : ಕಾಫಿ ಅತ್ಯುತ್ತಮ ರಿಫ್ರೆಶರ್ ಎಂಬುದು ಎಲ್ಲರಿಗೂ ಗೊತ್ತು. ಆದರೆ, ಕಾಫಿ ಕೂದಲಿನ ಹಲವು ಸಮಸ್ಯೆಗಳಿಗೆ ಆತ್ಯುತ್ತಮ ಪರಿಹಾರ ಎಂಬುದು ನಿಮಗೆ ತಿಳಿದಿದೆಯೇ? :ಸುಂದರವಾದ ಮತ್ತು ಆರೋಗ್ಯಕರ ಕೂದಲನ್ನು ಎಲ್ಲರೂ ಬಯಸುತ್ತಾರೆ. ಆದರೆ ಇದಕ್ಕಾಗಿ ದುಬಾರಿ ದುಬಾರಿ ಉತ್ಪನ್ನಗಳನ್ನು ಬಳಸುವ ಬದಲಿಗೆ ಪ್ರತಿ ಮನೆಯಲ್ಲೂ ಸುಲಭವಾಗಿ ಲಭ್ಯವಿರುವ ಕಾಫಿ ಪುಡಿ ತುಂಬಾ ಪ್ರಯೋಜನಕಾರಿ. ಕಾಫಿ ಬಳಕೆಯಿಂದ ಕೂದಲಿನ ಹಲವು ಸಮಸ್ಯೆಗಳಿಗೆ ಪರಿಹಾರ ಪಡೆಯಬಹುದು ಎಂದು ನಿಮಗೆ ತಿಳಿದಿದೆಯೇ? ಬದಲಾದ ಜೀವನಶೈಲಿ, ಕಳಪೆ ಆಹಾರಪದ್ಧತಿ ತಲೆಹೊಟ್ಟು, ಪೋಷಣೆಯ ಕೊರತೆ ಹೀಗೆಹಲವು ಕಾರಣ ( )ಗಳಿರಬಹುದು. ಕೂದಲಿನ ಈ ರೀತಿಯ ಸಮಸ್ಯೆಗಳಿಂದ ರಕ್ಷಣೆ ಪಡೆಯಲು ಮಾರುಕಟ್ಟೆಯಲ್ಲಿ ಹಲವು ಬಗೆಯ ತೈಲಗಳು, ಶಾಂಪೂಗಳು ಲಭ್ಯವಿವೆ. ಆದಾಗ್ಯೂ, ನಿಮ್ಮ ಮನೆಯಲ್ಲಿ ಸುಲಭವಾಗಿ ಲಭ್ಯವಿರುವ ಕಾಫಿಪುಡಿಯನ್ನು ಬಳಸಿ ಕೂದಲನ್ನು ಬುಡದಿಂದಲೂ ಗಟ್ಟಿಯಾಗಿಸಬಹುದು. ವಾಸ್ತವವಾಗಿ, ಕಾಫಿಯಲ್ಲಿ ಕೆಫೀನ್ ಮತ್ತು ಉತ್ಕರ್ಷಣ ನಿರೋಧಕಗಳು ಸಮೃದ್ಧವಾಗಿದೆ. ಇದು ಕೂದಲನ್ನು ಬುಡದಿಂದಲೂ ಗಟ್ಟಿಯಾಗಿಸಲು ಸಹಕಾರಿ ಆಗಿದೆ. ಮಾತ್ರವಲ್ಲ, ಕೂದಲನ್ನು ಬೆಳೆಯಲು ಪ್ರಚೋದಿಸುತ್ತದೆ. ಅಷ್ಟೇ ಅಲ್ಲ, ಕಾಫಿಪುಡಿಯನ್ನು ಮುಖಕ್ಕೆ ಹಚ್ಚುವುದರಿಂದ ಇದು ಚರ್ಮದ ಕೆಲವು ಸಮಸ್ಯೆಗಳಿಗೂ ಪರಿಹಾರ ನೀಡಬಲ್ಲದು. ಇದನ್ನೂ ಓದಿ- ಕೂದಲಿಗೆ ಕಾಫಿಪುಡಿ ಬಳಕೆಯಿಂದ ಆಗುವ ಪ್ರಯೋಜನಗಳೇನು ಎಂದು ನೋಡುವುದಾದರೆ...ಕೂದಲು ಬಲಗೊಳ್ಳುತ್ತದೆ:ಒಂದು ಬಟ್ಟಲಿನಲ್ಲಿ ಸ್ವಲ್ಪ ಕಾಫಿ ಪುಡಿ ( )ಯನ್ನು ತೆಗೆದುಕೊಂಡು ಅದರಲ್ಲಿ ಕಂಡೀಷನರ್ ಮತ್ತು ಕೊಬ್ಬರಿ ಎಣ್ಣೆಯನ್ನು ಬೆರೆಸಿ ಚೆನ್ನಾಗಿ ಮಿಶ್ರಣ ಮಾಡಿ. ಇದನ್ನು ಕೂದಲಿಗೆ ಹಚ್ಚಿ, 30 ನಿಮಿಷಗಳ ಬಳಿಕ ಸೌಮ್ಯ ಶಾಂಪೂವಿನಿಂದ ಹೇರ್ ವಾಶ್ ಮಾಡಿ. ನಿಯಮಿತವಾಗಿ ಈ ರೀತಿ ಮಾಡುತ್ತಾ ಬಂದರೆ ಕೂದಲು ಬಲಗೊಳ್ಳುತ್ತದೆ. ಕೂದಲು ಉದುರುವಿಕೆ:ಎರಡು ಟೇಬಲ್ ಸ್ಪೂನ್ ಗ್ರೌಂಡ್ ಕಾಫಿಯಲ್ಲಿ ಒಂದು ಚಮಚ ಅಲೋವೆರಾ ಜೆಲ್ ( )ಮತ್ತು ಜೇನುತುಪ್ಪವನ್ನು ಮಿಶ್ರಣ ಮಾಡಿ ಪೇಸ್ಟ್ ತಯಾರಿಸಿ. ಈ ಮಿಶ್ರಣವನ್ನು ಕೂದಲಿಗೆ ಅನ್ವಯಿಸಿ 15 ನಿಮಿಷಗಳ ಬಳಿಕ ವಾಶ್ ಮಾಡಿ. ಈ ರೀತಿ ಮಾಡುವುದರಿಂದ( ) ಪಡೆಯಬಹುದು. ಇದನ್ನೂ ಓದಿ- ಹೊಳೆಯುವ ಕೂದಲು:ನೀರು ಮತ್ತು ಕಾಫಿ ಪುಡಿಯನ್ನು ಸಮಾನ ಪ್ರಮಾಣದಲ್ಲಿ ಮಿಕ್ಸ್ ಮಾಡಿ ಒಂದು ಸ್ಪ್ರೇ ಬಾಟಲಿನಲ್ಲಿ ಹಾಕಿ ಈ ನೀರನ್ನು ಕೂದಲಿಗೆ ಸಿಂಪಡಿ ಕೆಲ ಹೊತ್ತು ಕೂದಲನ್ನು ಒಣಗಲು ಬಿಡಿ. ಇದರಿಂದ ಕೂದಲು ಬಲಗೊಳ್ಳುವುದರೊಂದಿಗೆ ಫಳ-ಫಳ ಹೊಳೆಯುತ್ತದೆ. ಸೂಚನೆ:ಪ್ರಿಯ ಓದುಗರೇ, ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ದಯವಿಟ್ಟು ಅದನ್ನು ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಿ. ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ. ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...