: ಮಕ್ಕಳಿಗೆ ಅಪ್ಪಿತಪ್ಪಿಯೂ ಈ ಆಹಾರವನ್ನು ಕೊಡಲೇಬೇಡಿ : ಕಾಫಿ-ಟೀಯಿಂದ ಮಕ್ಕಳನ್ನು ಆದಷ್ಟು ದೂರವಿಡಿ. ಮಕ್ಕಳಿಗೆ ಕೆಫೀನ್ ಹೆಚ್ಚಿನ ಪ್ರಮಾಣದಲ್ಲಿರುವ ಆಹಾರ ನೀಡಬೇಡಿ. ಇದರಿಂದ ಮಕ್ಕಳಲ್ಲಿ ನಿದ್ರಾಹೀನತೆ ಮತ್ತು ಖಿನ್ನತೆ ಉಂಟಾಗುವ ಸಾಧ್ಯತೆ ಇರುತ್ತದೆ. :ಬದಲಾದ ಜೀವನಶೈಲಿ ಮತ್ತು ಕೆಟ್ಟ ಆಹಾರ ಪದ್ಧತಿಯಿಂದ ಇಂದು ಅನೇಕರು ವಿವಿಧ ರೀತಿಯ ಕಾಯಿಲೆಗಳಿಗೆ ತುತ್ತಾಗುತ್ತಿದ್ದಾರೆ. ಇಂದು ಸಣ್ಣ ಮಕ್ಕಳಿಂದ ಹಿಡಿದು ಪ್ರತಿಯೊಬ್ಬರೂ ಜಂಕ್‌ಫುಡ್‌ಗೆ ಆಕರ್ಷಿತರಾಗಿರುತ್ತಾರೆ. ಆದರೆ ಮಕ್ಕಳಿಗೆ ಅಪ್ಪಿತಪ್ಪಿಯೂ ಕೆಲವು ಆಹಾರಗಳನ್ನು ನೀಡಬಾರದು. ಒಂದು ವೇಳೆ ನೀಡಿದರೆ ಅವರು ಅನಾರೋಗ್ಯಕ್ಕೆ ತುತ್ತಾಗುತ್ತಾರೆ. ಆ ಆಹಾರಗಳು ಯಾವುವು ಎಂದು ತಿಳಿಯಿರಿ... ಇದನ್ನೂ ಓದಿ: ●ಅಥವಾ ಸಾಫ್ಟ್ ಚೀಸ್ ಅನ್ನು ಮಕ್ಕಳಿಗೆ ಕೊಡಬಾರದು. ಇದರ ಜೊತೆಗೆ ಸಾಶ್ಮೀ ಅಥವಾ ಸುಶಿ ರೀತಿಯ ಹಸಿ ಮಾಂಸವನ್ನೂ ನೀಡಬೇಡಿ. ಇದು ನಿಮ್ಮ ಮಕ್ಕಳ ಜೀರ್ಣಕ್ರಿಯೆ ಅಪಾಯವನ್ನುಂಟು ಮಾಡಿ ಆಯಾಸವನ್ನುಂಟು ಮಾಡುತ್ತದೆ.● ಚಿಪ್ಸ್ ಹಾಗೂ ಕರಿದ ಪದಾರ್ಥಗಳು ಹೆಚ್ಚಿನ ಪ್ರಮಾಣದ ಉಪ್ಪಿನಾಂಶವು ಮಕ್ಕಳ ಕಿಡ್ನಿ ಮೇಲೆ ಪರಿಣಾಮ ಬೀರುತ್ತದೆ.● ಚಿಪ್ಸ್ ಮತ್ತು ಉಪ್ಪಿನ ಕಾಯಿ ಸೇರಿದಂತೆ ಇತರೆ ಕರಿದ ತಿಂಡಿಗಳನ್ನು ಮಕ್ಕಳಿಗೆ ಅಪ್ಪಿತಪ್ಪಿಯೂ ನೀಡಬಾರದು.● ಬಿಸ್ಕೆಟ್, ಚಾಕೊಲೇಟ್ ಅಥವಾ ಕೇಕ್‌ಗಳನ್ನು ಮಕ್ಕಳಿಗೆ ನೀಡಬಾರದು. ಇದರಿಂದ ಮಲಬದ್ಧತೆ ಸಮಸ್ಯೆ ಉಂಟಾಗಬಹುದು. ಈ ಎಲ್ಲಾ ಆಹಾರ ಪದಾರ್ಥಗಳು ಬಹುಬೇಗ ಜೀರ್ಣವಾಗುವುದಿಲ್ಲ.● ಕಾಫಿ-ಟೀಯಿಂದ ಮಕ್ಕಳನ್ನು ಆದಷ್ಟು ದೂರವಿಡಿ. ಮಕ್ಕಳಿಗೆ ಕೆಫೀನ್ ಹೆಚ್ಚಿನ ಪ್ರಮಾಣದಲ್ಲಿರುವ ಆಹಾರ ನೀಡಬೇಡಿ. ಇದರಿಂದ ಮಕ್ಕಳಲ್ಲಿ ನಿದ್ರಾಹೀನತೆ ಮತ್ತು ಖಿನ್ನತೆ ಉಂಟಾಗುವ ಸಾಧ್ಯತೆ ಇರುತ್ತದೆ.● ಮಕ್ಕಳು ಬೆಳೆಯುತ್ತಿದ್ದಂತೆ ಮೂಳೆಗಳಿಗೆ ಕ್ಯಾಲ್ಸಿಯಂ ಅಂಶದ ಅವಶ್ಯಕತೆಯಿರುತ್ತದೆ. ಹೀಗಾಗಿ ಮಕ್ಕಳಿಗೆ ಹೆಚ್ಚಿನ ಹಾಲು ನೀಡಬೇಕು.● ಬೀನ್ಸ್,, ಹೂಕೋಸು ಮತ್ತು ಬ್ರೊಕೊಲಿಯಂತಹ ಹಸಿ ತರಕಾರಿಗಳನ್ನು ಮಕ್ಕಳಿಗೆ ನೀಡಬೇಡಿ. ಇದರಲ್ಲಿ ಹೆಚ್ಚಿನ ಪ್ರಮಾಣದ ನೈಟ್ರೇಟ್ಸ್‌ಗಳು ಇರಲಿವೆ. ಇದನ್ನೂ ಓದಿ: ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...