: ಗೃಹಲಕ್ಷ್ಮಿ ಹಾಗೂ ಅನ್ನಭಾಗ್ಯ ಯೋಜನೆಯ ಹಣದ ಸ್ಟೇಟಸ್‌ ತಿಳಿಯಲು ಇಷ್ಟು ಮಾಡಿ : ಅನೇಕರಿಗೆ ಗೃಹಲಕ್ಷ್ಮಿ ಹಾಗೂ ಅನ್ನಭಾಗ್ಯದ ಯೋಜನೆ ಹಣದ ಸ್ಟೇಟಸ್‌ ಹೇಗೆ ಚೆಕ್‌ ಮಾಡಬೇಕು ಅನ್ನೋದರ ಬಗ್ಗೆ ತಿಳಿದಿರುವುದಿಲ್ಲ. ಇದರ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ. :ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿಗಳ ಪೈಕಿ ಗೃಹಲಕ್ಷ್ಮಿ ಹಾಗೂ ಅನ್ನಭಾಗ್ಯ ಯೋಜನೆಗಳು ಸೇರಿವೆ. ರಾಜ್ಯದ ಮಹಿಳೆಯರ ಸಬಲೀಕರಣಕ್ಕಾಗಿ ರಾಜ್ಯದ ಕಾಂಗ್ರೆಸ್ ಸರ್ಕಾರವು ಗೃಹಲಕ್ಷ್ಮಿ ಯೋಜನೆಯನ್ನು ರೂಪಿಸಿದೆ.‌ ಮಹಿಳೆಯರ ಆರ್ಥಿಕ ಸಬಲೀಕರಣದ ದೃಷ್ಠಿಯಿಂದ ಈ ಯೋಜನೆಯನ್ನು ಜಾರಿಗೆ ತರಲಾಗಿದೆ. ಕುಟುಂಬದ ನಿರ್ವಹಣೆಯಲ್ಲಿಯ ಪಾತ್ರ ಬಹುದೊಡ್ಡದು. ಆದ್ದರಿಂದ ಮನೆಯ ನಿರ್ವಹಣೆಗೆ ಅನುಕೂಲವಾಗಲಿ ಎಂದು ಸರ್ಕಾರವು ಕುಟುಂಬದ ಯಜಮಾನಿಯರ ಖಾತೆಗೆ ಪ್ರತಿ ತಿಂಗಳು 2000 ರೂ ಜಮಾ ಮಾಡಲು ಈ ಯೋಜನೆ ಅನುಷ್ಠಾನ ಮಾಡಿದೆ. ಈಗಾಗಲೇ ಮೇ ತಿಂಗಳವರೆಗೆ 10 ಕಂತುಗಳ ಗೃಹಲಕ್ಷ್ಮಿ ಯೋಜನೆ ಹಣ ಮಹಿಳೆಯರ ಖಾತೆಗೆ ಜಮಾ ಆಗಿದೆ. ತಾಂತ್ರಿಕ ಕಾರಣದಿಂದ ಜೂನ್‌ ಮತ್ತು ಜುಲೈ ತಿಂಗಳ ಹಣ ಬಿಡುಗಡೆಯಾಗಿರಲಿಲ್ಲ. ಈಗ ಈ ಎರಡೂ ತಿಂಗಳ 4000 ರೂ. ಹಣವನ್ನು ಒಟ್ಟಿಗೆ ಜಮಾ ಮಾಡುವುದಾಗಿ ಸ್ವತಃ ಸಿಎಂ ಸಿದ್ದರಾಮಯ್ಯನವರೇ ತಿಳಿಸಿದ್ದಾರೆ. ಇದನ್ನೂ ಓದಿ: ಇನ್ನು ಸರ್ಕಾರದ ಅನ್ನಭಾಗ್ಯ ಯೋಜನೆಯಡಿ 10 ಕೆಜಿ ಅಕ್ಕಿ ನೀಡುವ ಭರವಸೆ ನೀಡಲಾಗಿತ್ತು, ಆದರೆ ಈಗ ಪ್ರತಿ ವ್ಯಕ್ತಿಗೆ 5 ಕೆಜಿ ಅಕ್ಕಿ ನೀಡಲಾಗುತ್ತಿದೆ. ಉಳಿದ 5 ಕೆಜಿ ಅಕ್ಕಿ ಬದಲಿಗೆ ಪ್ರತಿ ಕೆಜಿ ಅಕ್ಕಿಗೆ 34 ರೂ.ಗಳಂತೆ ಐದು ಕೆಜಿ ಅಕ್ಕಿಗೆ ಒಟ್ಟು 170 ರೂ.ವನ್ನು ನೇರವಾಗಿ ಖಾತೆಗೆ ಜಮೆ ಮಾಡಲಾಗುತ್ತಿದೆ. ಬಡತನ ರೇಖೆಗಿಂತ ಕೆಳಗಿರುವ ಅಥವಾ ಅಂತ್ಯೋದಯ ಪಡಿತರ ಚೀಟಿಯನ್ನು ಹೊಂದಿರುವ ಫಲಾನುಭವಿಗಳಿಗೆ ಈ ಯೋಜನೆಯ ಲಾಭ ಸಿಗಲಿದೆ. ಅನೇಕರಿಗೆ ಗೃಹಲಕ್ಷ್ಮಿ ಹಾಗೂ ಅನ್ನಭಾಗ್ಯದ ಯೋಜನೆ ಹಣದ ಸ್ಟೇಟಸ್‌ ಹೇಗೆ ಚೆಕ್‌ ಮಾಡಬೇಕು ಅನ್ನೋದರ ಬಗ್ಗೆ ತಿಳಿದಿರುವುದಿಲ್ಲ. ಇದರ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ. ಗೃಹಲಕ್ಷ್ಮಿ ಹಾಗೂ ಅನ್ನಭಾಗ್ಯದ ಹಣದ ಸ್ಟೇಟಸ್‌ ಈ ರೀತಿ ಚೆಕ್‌ ಇದನ್ನೂ ಓದಿ: ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...