ನಿಮ್ಮ ಚರ್ಮದಲ್ಲಿ ಕಾಣುವ ಈ ಲಕ್ಷಣ ನೀಡುತ್ತದೆ ಹೃದಯಾಘಾತದ ಮುನ್ಸೂಚನೆ :ಹೃದಯಾಘಾತಕ್ಕೂ ಮುನ್ನ ಚರ್ಮದಲ್ಲಿ ಈ ಲಕ್ಷಣಗಳು ಕಾಣಿಸುತ್ತವೆ. :ಇತ್ತೀಚಿನ ದಿನಗಳಲ್ಲಿ ಹೃದಯಾಘಾತದ ಸಮಸ್ಯೆ ಹೆಚ್ಚುತ್ತಿದೆ.ಕಿರಿಯ ವಯಸ್ಸಿನಲ್ಲಿಯೇ ಅದೆಷ್ಟೋ ಮಂದಿ ಹೃದಯಾಘಾತಕ್ಕೆ ಬಲಿಯಾಗುತ್ತಿದ್ದಾರೆ.ಹೃದಯಕ್ಕೆ ಸರಿಯಾಗಿ ರಕ್ತ ಪೂರೈಕೆ ಆಗದೆ ಹೃದಯವು ಕಾರ್ಯನಿರ್ವಹಿಸುವುದನ್ನು ನಿಲ್ಲಿಸುವುದಕ್ಕೆ ಹೃದಯಾಘಾತ ಎನ್ನುತ್ತಾರೆ. ಹೃದಯಾಘಾತಕ್ಕೂ ಮುನ್ನ ನಮ್ಮ ದೇಹದಲ್ಲಿ ಅನೇಕ ಬದಲಾವಣೆಗಳಾಗುತ್ತವೆ. ಈ ಲಕ್ಷಣಗಳನ್ನು ಅರ್ಥ ಮಾಡಿಕೊಳ್ಳಬೇಕು. ಹೃದಯಾಘಾತದ ಇತರ ಚಿಹ್ನೆಗಳು:ಹೃದಯಾಘಾತದ ಮೊದಲು ಮುನ್ಸೂಚನೆ ನೀಡುತ್ತವೆ. ಚರ್ಮವು ತೆಳುವಾಗಿ,ತಿಳಿ ಬೂದು ಬಣ್ಣಕ್ಕೆ ತಿರುಗುತ್ತದೆ.ಪದೇ ಪದೇ ವಿನಾ ಕಾರಣ ಬೆವರೂ ಬರುವುದು, ವಾಕರಿಕೆ, ಉಸಿರಾಟದಲ್ಲಿ ತೊಂದರೆ, ಆತಂಕ, ತಲೆಸುತ್ತುವುದು ಮುಂತಾ ಲಕ್ಷಣಗಳು ಕಾಣಿಸುತ್ತವೆ. ಇದನ್ನೂ ಓದಿ : ಲಿಂಗವನ್ನು ಆಧರಿಸಿ ಗೋಚರಿಸುತ್ತವೆ ಈ ಲಕ್ಷಣಗಳು :ಪುರುಷರಿಗೆ ಹೃದಯಾಘಾತಕ್ಕೂ ಎದೆ ನೋವು ಕಾಣಿಸಿಕೊಂಡರೆ,ಮಹಿಳೆಯರಿಗೆ ಉಸಿರಾಟದ ತೊಂದರೆ,ಕುತ್ತಿಗೆ ಮತ್ತು ದವಡೆಯಲ್ಲಿ ನೋವು ಕಾಣಿಸಿಕೊಳ್ಳುತ್ತದೆ. ಹೃದಯಾಘಾತದ ಅಪಾಯವನ್ನು ಹೆಚ್ಚಿಸುವ ಇನ್ನೊಂದು ಕಾರಣವೆಂದರೆ ಮಧುಮೇಹ.ಹೃದಯಾಘಾತದ ಅತ್ಯಂತ ಸಂದಿಗ್ದ ಲಕ್ಷಣಗಳಲ್ಲಿ ಒಂದಾಗಿದೆ.ಈ ಕಾರಣದಿಂದಾಗಿ ರೋಗಿಗೆ ಸೌಮ್ಯವಾದ ಎದೆಯುರಿ ಅಥವಾ ಎದೆ ನೋವೂ ಕಾಣಿಸುತ್ತದೆ.ಬಹುತೇಕ ಮಂದಿ ಈ ಹಂತವನ್ನು ನಿರ್ಲಕ್ಷಿಸಿ ಬಿಡುತ್ತಾರೆ. ಅಪಾಯವನ್ನು ಕಡಿಮೆ ಮಾಡುವುದು ಹೇಗೆ ?:ಆರೋಗ್ಯಕರ ಆಹಾರ ಮತ್ತು ಆರೋಗ್ಯಕರ ಜೀವನಶೈಲಿಯ ಸಹಾಯದಿಂದ ಮಾತ್ರ ಹೃದಯಾಘಾತದ ಅಪಾಯವನ್ನು ಕಡಿಮೆ ಮಾಡಬಹುದು.ಆರೋಗ್ಯಕರ ತೂಕವನ್ನು ಕಾಪಾಡಿಕೊಳ್ಳಲು,ಎಲ್ಲಾ ಪೋಷಕಾಂಶಗಳನ್ನು ಒಳಗೊಂಡಿರುವ ಆರೋಗ್ಯಕರ ಆಹಾರವನ್ನು ತೆಗೆದುಕೊಳ್ಳಿ. ಇದನ್ನೂ ಓದಿ : ತರಕಾರಿಗಳ ಸೇವನೆ :ಆಹಾರದಲ್ಲಿ ತರಕಾರಿಗಳನ್ನು ಸೇರಿಸಿಕೊಳ್ಳಬೇಕು.ಇದು ಅನೇಕ ಜೀವಸತ್ವಗಳು ಮತ್ತು ಖನಿಜಗಳ ಸಮೃದ್ಧ ಮೂಲವಾಗಿದೆ. ಆರೋಗ್ಯಕರ ಆಹಾರವು ಹೃದಯಾಘಾತದ ಅಪಾಯವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. (ಸೂಚನೆ: ಇಲ್ಲಿ ನೀಡಲಾದ ಮಾಹಿತಿ ಮತ್ತು ಮನೆಮದ್ದುಗಳು ಸಾಮಾನ್ಯ ಮಾಹಿತಿಯನ್ನು ಆಧರಿಸಿವೆ. ಅದನ್ನು ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಬೇಕು. ಜೀ ಕನ್ನಡ ನ್ಯೂಸ್ ಇದನ್ನು ಅನುಮೋದಿಸುವುದಿಲ್ಲ.) ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...