ಖಾಲಿ ಹೊಟ್ಟೆಯಲ್ಲಿ ಈ ಜ್ಯೂಸ್ ಕುಡಿದರೆ ಸಾಕು ಕೂದಲು ಕಪ್ಪಾಗಿ ಸೊಂಟ ದಾಟಿ ಬೆಳೆಯುವುದು ! : ಆಮ್ಲಾ ಜ್ಯೂಸ್ ಕುಡಿಯುವುದರಿಂದ ದೇಹಕ್ಕೆ ಹಲವು ಪ್ರಯೋಜನಗಳಿವೆ. ಅದರಲ್ಲೂ ಬೆಳಗೆದ್ದು ಖಾಲಿ ಹೊಟ್ಟೆಗೆ ನೆಲ್ಲಿಕಾಯಿ ರಸ ಕುಡಿದರೆ ಕೂದಲಿನ ಆರೋಗ್ಯ ಸುಧಾರಿಸುವುದು. :ನೆಲ್ಲಿಕಾಯಿಯನ್ನು ಆಯುರ್ವೇದದಲ್ಲಿ ಅಮೃತ ಎಂದು ಕರೆಯಲಾಗುತ್ತದೆ. ವಿಟಮಿನ್ ಸಿ ಮತ್ತು ಉತ್ಕರ್ಷಣ ನಿರೋಧಕಗಳಲ್ಲಿ ನೆಲ್ಲಿಕಾಯಿ ಸಮೃದ್ಧವಾಗಿರುತ್ತದೆ. ಇದು ಆಂಟಿಬ್ಯಾಕ್ಟೀರಿಯಲ್ ಗುಣಗಳನ್ನು ಹೊಂದಿದೆ. ನಿಯಮಿತವಾಗಿ ಆಮ್ಲಾ ಜ್ಯೂಸ್ ಕುಡಿಯುವುದರಿಂದ ದೇಹಕ್ಕೆ ಹಲವು ಪ್ರಯೋಜನಗಳಿವೆ. ಅದರಲ್ಲೂ ಬೆಳಗೆದ್ದು ಖಾಲಿ ಹೊಟ್ಟೆಗೆ ನೆಲ್ಲಿಕಾಯಿ ರಸ ಕುಡಿದರೆ ಕೂದಲಿನ ಆರೋಗ್ಯ ಸುಧಾರಿಸುವುದು. ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ: ನೆಲ್ಲಿಕಾಯಿಯಲ್ಲಿ ಸಮೃದ್ಧವಾಗಿರುವ ವಿಟಮಿನ್ ಸಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಇದು ದೇಹವನ್ನು ರೋಗಗಳಿಂದ ರಕ್ಷಿಸುತ್ತದೆ. ಜೀರ್ಣಾಂಗ ವ್ಯವಸ್ಥೆಯ ಆರೋಗ್ಯ: ನೆಲ್ಲಿಕಾಯಿ ಜೀರ್ಣಾಂಗ ವ್ಯವಸ್ಥೆಯನ್ನು ಸ್ವಚ್ಛಗೊಳಿಸುತ್ತದೆ. ಮಲಬದ್ಧತೆ ಮತ್ತು ಅಜೀರ್ಣದಂತಹ ಸಮಸ್ಯೆಗಳನ್ನು ಕಡಿಮೆ ಮಾಡುತ್ತದೆ. ಇದನ್ನೂ ಓದಿ: ಚರ್ಮದ ಆರೋಗ್ಯ: ಆಮ್ಲಾದಲ್ಲಿರುವ ಆಂಟಿಆಕ್ಸಿಡೆಂಟ್‌ಗಳು ಚರ್ಮದ ಆರೋಗ್ಯವನ್ನು ಸುಧಾರಿಸುತ್ತದೆ ಮತ್ತು ಸುಕ್ಕುಗಳನ್ನು ತಡೆಯುತ್ತದೆ. ಕೂದಲಿನ ಆರೋಗ್ಯ: ನೆಲ್ಲಿಕಾಯಿ ಕೂದಲು ಉದುರುವುದನ್ನು ತಡೆಯುತ್ತದೆ. ಅಲ್ಲದೇ ಕೂದಲನ್ನು ಬಲವಾಗಿ ಮತ್ತು ನಯವಾಗಿ ಮಾಡುತ್ತದೆ. ಬಿಳಿ ಕೂದಲು ಬಾರದಂತೆ ತಡೆದು ಕಪ್ಪಾದ ಉದ್ದ ಕೂದಲು ಬೆಳೆಯಲು ಪ್ರಯೋಜನಕಾರಿಯಾಗಿದೆ. ಹೃದಯದ ಆರೋಗ್ಯ: ಆಮ್ಲಾ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡುತ್ತದೆ ಮತ್ತು ಹೃದಯದ ಆರೋಗ್ಯವನ್ನು ಸುಧಾರಿಸುತ್ತದೆ. ಮಧುಮೇಹ ನಿಯಂತ್ರಣ: ಆಮ್ಲಾ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ದೇಹವನ್ನು ನಿರ್ವಿಷಗೊಳಿಸುವುದು: ಆಮ್ಲಾ ದೇಹದಿಂದ ವಿಷವನ್ನು ಹೊರಹಾಕುತ್ತದೆ ಮತ್ತು ದೇಹವನ್ನು ಶುದ್ಧಗೊಳಿಸುತ್ತದೆ. ಇದನ್ನೂ ಓದಿ: ಆಮ್ಲಾ ಜ್ಯೂಸ್ ಕುಡಿಯುವ ವಿಧಾನ: 20-30 ಮಿಲಿ ಆಮ್ಲಾ ಜ್ಯೂಸ್ ಅನ್ನು ಒಂದು ಲೋಟ ನೀರಿಗೆ ಬೆರೆಸಿ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಕುಡಿಯಿರಿ. ನೀವು ರುಚಿಗೆ ಸ್ವಲ್ಪ ಜೇನುತುಪ್ಪ ಸೇರಿಸಿ ಕುಡಿಯಬಹುದು. ಕೆಲವರು ಇದನ್ನು ನಿಂಬೆ ರಸದೊಂದಿಗೆ ಕುಡಿಯುತ್ತಾರೆ. ಇದರಿಂದ ರೋಗನಿರೋಧಕ ಶಕ್ತಿ ಇನ್ನಷ್ಟು ಹೆಚ್ಚಿಸುತ್ತದೆ. ಗಮನಿಸಿ:ಈ ಲೇಖನವು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆ ತೆಗೆದುಕೊಳ್ಳಿ. ಇದನ್ನು ಖಚಿತಪಡಿಸುವುದಿಲ್ಲ. ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...