ಸಕ್ಕರೆ ಕಾಯಿಲೆಗೆ ಕರಿಬೇವು ಪವಾಡ ಮದ್ದು..ತಟ್ಟನೆ ಕಂಟ್ರೋಲ್‌ಗೆ ಬರುತ್ತೆ ಶುಗರ್‌ : ಕರಿಬೇವಿನ ಎಲೆಗಳನ್ನು ನಿಯಮಿತವಾಗಿ ಸೇವಿಸುವುದರಿಂದ ಮಧುಮೇಹ ಮತ್ತು ಬೊಜ್ಜು ಬರದಂತೆ ತಡೆಯಬಹುದು ಎನ್ನುತ್ತಾರೆ ಆಯುರ್ವೇದ ತಜ್ಞರು. ಇದು ದೇಹದಲ್ಲಿನ ಕೆಟ್ಟ ಕೊಬ್ಬನ್ನು ನಿಯಂತ್ರಿಸಿ ತೂಕ ಇಳಿಸಲು ಸಹಾಯ ಮಾಡುತ್ತದೆ ಅಷ್ಟೆ ಅಲ್ಲದೆ ಮಧುಮೇಹವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. :ಕರಿಬೇವಿನ ಎಲೆಗಳನ್ನು ನಿಯಮಿತವಾಗಿ ಸೇವಿಸುವುದರಿಂದ ಮಧುಮೇಹ ಮತ್ತು ಬೊಜ್ಜು ಬರದಂತೆ ತಡೆಯಬಹುದು ಎನ್ನುತ್ತಾರೆ ಆಯುರ್ವೇದ ತಜ್ಞರು. ಇದು ದೇಹದಲ್ಲಿನ ಕೆಟ್ಟ ಕೊಬ್ಬನ್ನು ನಿಯಂತ್ರಿಸಿ ತೂಕ ಇಳಿಸಲು ಸಹಾಯ ಮಾಡುತ್ತದೆ ಅಷ್ಟೆ ಅಲ್ಲದೆ ಮಧುಮೇಹವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಇದು ಗ್ಯಾಸ್ಟ್ರೊದಂತಹ ಗಂಭೀರ ಸಮಸ್ಯೆಗಳನ್ನು ಸಹ ನಿವಾರಿಸುತ್ತದೆ. ಕರಿಬೇವಿನ ಎಲೆಗಳು ಉತ್ಕರ್ಷಣ ನಿರೋಧಕಗಳು ಸೇರಿದಂತೆ ವಿವಿಧ ಔಷಧೀಯ ಗುಣಗಳಿಂದ ಸಮೃದ್ಧವಾಗಿದ್ದು, ವಿಟಮಿನ್ ಎ, ಬಿ ಮತ್ತು ಇ ನಿಕೋಟಿನಿಕ್ ಆಮ್ಲದಂತಹ ಅಂಶಗಳಿಂದ ಕೂಡಿದೆ. ಕರಿಬೇವಿನ ಎಲೆಗಳು ಜೀರ್ಣಕ್ರಿಯೆಗೆ ಸಂಬಂಧಿಸಿದ ಸಮಸ್ಯೆಗಳಿಗೆ ದಿವ್ಯ ಔಷಧವೆಂದೇ ಹೇಳಬಹುದು. ಇದನ್ನು ನಿಯಮಿತವಾಗಿ ಸೇವಿಸುವುದರಿಂದ ಜೀರ್ಣಾಂಗ ವ್ಯವಸ್ಥೆಯು ಉತ್ತಮವಾಗಿ ಕಾರ್ಯನಿರ್ವಹಿಸುತ್ತದೆ. ಇದು ಚರ್ಮದ ಆರೈಕೆಗೂ ತುಂಬಾ ಒಳ್ಳೆಯದು. ರೋಗನಿರೋಧಕ ಶಕ್ತಿ ಹೆಚ್ಚಾದಂತೆ ಅನೇಕ ರೋಗಗಳು ನಮ್ಮನ್ನು ತಲುಪುವುದಿಲ್ಲ. ಇದರಲ್ಲಿರುವ ಆ್ಯಂಟಿಆಕ್ಸಿಡೆಂಟ್‌ಗಳು ರಕ್ತವನ್ನು ಶುಚಿಗೊಳಿಸುವುದರೊಂದಿಗೆ ಮೂಳೆ ಆರೋಗ್ಯವನ್ನು ಕಾಪಾಡುತ್ತದೆ. ಸೂಚನೆ: ಈ ಲೇಖನವು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಜೀ ಕನ್ನಡ ನ್ಯೂಸ್‌ ಇದನ್ನು ಖಚಿತಪಡಿಸುವುದಿಲ್ಲ. ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತಪ್ಪದೇ ತೆಗೆದುಕೊಳ್ಳಿ. ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...