ಔಷಧಿ, ಪಥ್ಯದ ಬದಲು ಈ ತರಕಾರಿಯನ್ನು ಸೇವಿಸುತ್ತಾ ಬನ್ನಿ ! ಬ್ಲಡ್ ಶುಗರ್ ನಾರ್ಮಲ್ ಆಗಿಯೇ ಉಳಿಯುವುದು ! :ಮಧುಮೇಹ ರೋಗಿಗಳು ಈ ತರಕಾರಿಯನ್ನು ಸೇವಿಸುವ ಮೂಲಕ ಬ್ಲಡ್ ಶುಗರ್ ಅನ್ನು ಸದಾ ನಿಯಂತ್ರಣದಲ್ಲಿ ಇಟ್ಟುಕೊಳ್ಳಬಹುದು. :ಮಧುಮೇಹವು ಇತ್ತೀಚಿನ ದಿನಗಳಲ್ಲಿ ಅತ್ಯಂತ ಗಂಭೀರ ಸಮಸ್ಯೆಯಾಗಿದೆ.ತಪ್ಪು ಆಹಾರ ಪದ್ಧತಿ, ಕಳಪೆ ಜೀವನಶೈಲಿ,ದೈಹಿಕ ಚಟುವಟಿಕೆಯ ಕೊರತೆ, ಒತ್ತಡ ಇವುಗಳು ಅಧಿಕ ರಕ್ತದ ಸಕ್ಕರೆಗೆ ಕಾರಣವಾಗಿದೆ.ಮಧುಮೇಹಿಗಳು ತಮ್ಮ ಆಹಾರದ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು.ಈ ಕಾಯಿಲೆಯಲ್ಲಿ ತೋರುವ ನಿರ್ಲಕ್ಷ್ಯವು ಆರೋಗ್ಯಕ್ಕೆ ಹಾನಿಕಾರಕವಾಗಿದೆ.ಕೆಲವು ತರಕಾರಿಗಳ ಸೇವನೆಯು ಮಧುಮೇಹವನ್ನು ನಿಯಂತ್ರಿಸುವಲ್ಲಿ ಬಹಳ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತದೆ. ಮಧುಮೇಹ ನಿಯಂತ್ರಿಸುವ ತರಕಾರಿಗಳು :ಸೋರೆಕಾಯಿ :ಸೋರೆಕಾಯಿಬಹಳ ಪ್ರಯೋಜನಕಾರಿ ತರಕಾರಿಯಾಗಿದೆ.ಇದು ತುಂಬಾ ಕಡಿಮೆ ಕ್ಯಾಲೋರಿಗಳನ್ನು ಹೊಂದಿದ್ದು, ಇದರಲ್ಲಿ ಫೈಬರ್ ಹೇರಳವಾಗಿ ಕಂಡುಬರುತ್ತದೆ.ಇದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸುವಲ್ಲಿ ಪರಿಣಾಮಕಾರಿಯಾಗಿದೆ.ಮಧುಮೇಹಿಗಳು ಸೋರೆಕಾಯಿಯನ್ನು ಜ್ಯೂಸ್, ಪಾಲಿ, ಸಾಂಬಾರ್ ಅಥವಾ ಸೂಪ್ ರೂಪದಲ್ಲಿ ಸೇವಿಸಬಹುದು. ಇದನ್ನೂ ಓದಿ : ಹಾಗಲಕಾಯಿ :ಹಾಗಲಕಾಯಿ ಮಧುಮೇಹ ರೋಗಿಗಳಿಗೆ ತುಂಬಾ ಪ್ರಯೋಜನಕಾರಿ.ಇದು ಮಾರ್ಮೊಡೋಸಿನ್ ಎಂಬ ಅಂಶವನ್ನು ಹೊಂದಿರುತ್ತದೆ. ಇದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.ಹಾಗಲಕಾಯಿ ತರಕಾರಿ ಅಥವಾ ಜ್ಯೂಸ್ ಸೇವಿಸುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿರುತ್ತದೆ. ಸಿಹಿ ಕುಂಬಳಕಾಯಿ :ಸಿಹಿ ಕುಂಬಳಕಾಯಿಯಲ್ಲಿ ಫೈಬರ್ ಸಮೃದ್ಧವಾಗಿರುತ್ತದೆ. ಇದುಸುಧಾರಿಸಲು ಸಹಾಯ ಮಾಡುತ್ತದೆ. ಈ ಮೂಲಕ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕೂಡಾ ನಿಯಂತ್ರಣದಲ್ಲಿ ಇಡುತ್ತದೆ.ಇದರ ಸೇವನೆಯು ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡುವಲ್ಲಿ ಕೂಡಾ ಪರಿಣಾಮಕಾರಿಯಾಗಿದೆ. ಇದನ್ನೂ ಓದಿ : ಬೆಂಡೆಕಾಯಿ :ಮಧುಮೇಹ ರೋಗಿಗಳಿಗೆ ಬೆಂಡೆಕಾಯಿ ಉತ್ತಮ ಆಯ್ಕೆಯಾಗಿದೆ.ಇದರಲ್ಲಿ ಕರಗುವ ಫೈಬರ್ ಇರುತ್ತದೆ. ಇದು ರಕ್ತದಲ್ಲಿನ ಸಕ್ಕರೆಯ ಏರಿಕೆಯನ್ನು ತಡೆಯಲು ಸಹಾಯ ಮಾಡುತ್ತದೆ.ಇದರ ಬೀಜಗಳು ಮತ್ತು ಸಿಪ್ಪೆಯಲ್ಲಿ ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಿಸುವ ಗುಣಗಳು ಕಂಡುಬರುತ್ತವೆ. ಪಾಲಕ್ ಸೊಪ್ಪು :ಪಾಲಕ್ ಸೊಪ್ಪು ಜೀವಸತ್ವಗಳು,ಖನಿಜಗಳು ಮತ್ತು ಉತ್ಕರ್ಷಣ ನಿರೋಧಕಗಳು ಸಮೃದ್ಧವಾಗಿವೆ.ಅದರಲ್ಲಿ ಕಾರ್ಬೋಹೈಡ್ರೇಟ್ ಗಳ ಪ್ರಮಾಣವು ತುಂಬಾ ಕಡಿಮೆಯಾಗಿದೆ. ಇದರಿಂದಾಗಿ ಇದು ರಕ್ತದಲ್ಲಿನ ಸಕ್ಕರೆಯನ್ನು ಹೆಚ್ಚಿಸಲು ಅವಕಾಶ ನೀಡುವುದಿಲ್ಲ.ಇದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿಡುತ್ತದೆ. (ಸೂಚನೆ: ಪ್ರಿಯ ಓದುಗರೇ, ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ದಯವಿಟ್ಟು ಅದನ್ನು ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಿ. ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ. ) ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...